

ಉಡುಪಿ: ಪುತ್ತಿಗೆ ಮಠ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕರೊನಾ ಪಾಸಿಟಿವ್ ದೃಡವಾಗಿದೆ. ಹದಿನೈದು ದಿನಗಳ ಹಿಂದೆ ಶ್ರೀಗಳು ಬೆಂಗಳೂರು ಪ್ರವಾಸ ಮುಗಿಸಿ ಹಿಂದಿರುಗಿದ್ದರು ಎಂದು ತಿಳಿದು ಬಂದಿದೆ.
ನಗರದ ಕೋವಿಡ್ ಆಸ್ಪತ್ರೆಗೆ ಶ್ರೀಗಳು ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಶ್ರೀಗಳ ಸಂಪರ್ಕದಲ್ಲಿದ್ದ ಶಿಷ್ಯರು, ಭಕ್ತರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವಿವಿದ ಕಡೇಗಳಲ್ಲಿ ಭಕ್ತರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.