

ಪುತ್ತೂರು: ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹರೀಶ್ ಶಾಸ್ತ್ರೀ ಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಗೌರವಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿ ಸಚಿನ್ ಶೆಣೈ, ಸದಸ್ಯರಾದ ಕೆ. ಎನ್ ಸುಬ್ರಹ್ಮಣ್ಯ, ವತ್ಸಲಾ ರಾಜ್ಞಿ, ಡಾ. ಮುರಳೀಕೃಷ್ಣ ರೈ, ಡಾ. ಕೃಷ್ಣ ಪ್ರಸನ್ನ ಕೆ, ಇಂದಿರಾ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ಹರೀಶ್ ಶಾಸ್ತ್ರೀಯವರು 1997ರಿಂದ ಸುಮಾರು 25 ವರ್ಷಗಳ ಕಾಲ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಾಗಿ ಸೇವಾ ಅನುಭವವನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳಿಗೆ ಕ್ವಿಝ್ ಕಾರ್ಯಕ್ರಮಗಳನ್ನು ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ನಡೆಸಿದ ಪ್ರಾವಿಣ್ಯತೆಯನ್ನು ಪಡೆದಿರುವ ಇವರು ಭೌತಶಾಸ್ತ್ರ ವಿಷಯದಲ್ಲಿ ಕೋಚಿಂಗ್ ತರಗತಿಯನ್ನು ನೀಡುತ್ತಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ.