

ಬೆಂಗಳೂರು: ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಇಂಟರನ್ ಶಿಪ್ ತರಬೇತಿ ನೀಡಲು ವಿವಿಧ ಕಂಪೆನಿಗಳ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕಾಗಿ ವಿಶ್ವೇಶ್ವರಯ್ಯ ಸಂಶೋಧನಾ ಮತ್ತು ನಾವೀನ್ಯತೆ ಸಂಸ್ಥೆಯನ್ನು ಹುಟ್ಟುಹಾಕಿ 5 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪಕುಲಪತಿ ಡಾ ಎಸ್. ವಿದ್ಯಾಶಂಕರ್ ತಿಳಿಸಿದ್ದಾರೆ.
ಸೋಮನಹಳ್ಳಿಯ ಆಚಾರ್ಯ ಪಾಠಶಾಲಾ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ಸಂಶೋಧನಾ ಮತ್ತು ನಾವೀನ್ಯತೆ ಸಂಸ್ಥೆಯ ಸಹಾಯೋಗದೊಂದಿಗೆ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಮತ್ತು ಇಂಟರ್‌ನೆಟ್ ಆ್ ಥಿಂಗ್ಸ್ ಎಐಓಟಿ ಇಂಟರ್ನ್ ಶ್ಿ ಉದ್ಘಾಟಿಸಿ ಮಾತನಾಡಿದರು.
ಕಳೆದ 2 ವರ್ಷಗಳಿಂದ ವಿಟಿಯುನಲ್ಲಿ ಸಾಕಷ್ಟು ಕಂಪನಿಗಳ ಜತೆ ಒಡಂಬಡಿಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಪಡೆಯಲು ಅನುಕೂಲವಾಗುವಂತಹ ವಾತಾವರಣವನ್ನು ನಿರ್ಮಿಸಲಾಗಿದೆ.ಶೈಕ್ಷಣಿಕ ಸಂಸ್ಥೆ ಮತ್ತು ಕಂಪನಿಗಳ ನಡುವೆ ಇರುವ ಅಂತರವನ್ನು ಕಡಿಮೆ ಮಾಡಲು ವಿಟಿಯು ಸಾಕಷ್ಟು ರೀತಿಯಲ್ಲಿ ಪ್ರಯತ್ನಿಸುತ್ತಿದ್ದು, ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕೌಶಲ್ಯ ತರಬೇತಿಯನ್ನು ತಮ್ಮ ಕ್ಯಾಂಪಸ್‌ನಲ್ಲಿ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ.
ಎಂದು ತಿಳಿಸಿದರು.
2022 ರಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಕೊನೆಯ ವರ್ಷದ ಇಂಜಿನಿಯರಿಂಗ್ ಪದವಿಯಲ್ಲಿ ಯಾವುದೇ ತೊಂದರೆ ಇಲ್ಲದೇ ಈಗ ಚಾಲ್ತಿಯಲ್ಲಿರುವ ವಿವಿಧ ತಂತ್ರಜ್ಞಾನಗಳಲ್ಲಿ ತರಬೇತಿ ಪಡೆಯಲು ಅನುಕೂಲವಾಗುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಎಪಿಎಸ್ ಶೈಕ್ಷಣಿಕ ಸಂಸ್ಥೆಯ ಅಧ್ಯಕ್ಷ ಡಾ ಸಿಎ ವಿಷ್ಣು ಭರತ್ ಆಲಂಪಲ್ಲಿ, ಉಪಾಧ್ಯಾಕ್ಷ ಡಾ ಎಸ್.ಸಿ ಶರ್ಮಾ, ಪ್ರಾಂಶುಪಾಲ ಡಾ ಡಿ ಜಿ ಆನಂದ್, ಉಪ ಪ್ರಾಂಶುಪಾಲ ಡಾ ಕೆ ಎಸ್‌ಆನಂದ್ ಮತ್ತಿತರರಿದ್ದರು.