

ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರವು 5,151 ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಿದ್ದು, ಈ ನೇರ ನೇಮಕಾತಿಗಳ ವಿವರಗಳನ್ನು ಪ್ರಾಧಿಕಾರ ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ, ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ 5151 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.
ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಾಗಿರುವ ನಿರುದ್ಯೋಗಿ ಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ಕೊಟ್ಟಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 5,151 ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಿದ್ದು, ಈ ಸಂಬಂಧ ಪ್ರಕಟಣೆ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ, ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ, ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಿದೆ. ಶೀಘ್ರದಲ್ಲಿಯೇ ವಿವರವಾದ ಅಧಿಸೂಚನೆ ಪ್ರಕಟಿಸುವುದಾಗಿ ಕೆಇಎ ತಿಳಿಸಿದೆ.
ಸಾರಿಗೆ ಇಲಾಖೆಗೆ ಧಮಾಕ: ಆರ್ಜಿಯುಎಚ್ಎಸ್, ನೀರು ಸರಬರಾಜು ಮತ್ತು ಒಳಚರಂಡಿ, ಸೋಪ್ಸ್ ಆಂಡ್ ಡಿಟರ್ಜೆಂಟ್ ಇಲಾಖೆ ಸೇರಿ 146 ಹುದ್ದೆಗಳಿದ್ದು, ಉಳಿದ 5,005 ಹುದ್ದೆಗಳು ಸಾರಿಗೆ ಸಂಸ್ಥೆಗಳಿಗೆ ಸೇರಿವೆ. ಬಿಎಂಟಿಸಿಯಲ್ಲಿ 2,500 ನಿರ್ವಾಹಕ, ಕ-ಕ ಸಾರಿಗೆಯಲ್ಲಿ 1,737 ನಿರ್ವಾಹಕ, 500 ತಾಂತ್ರಿಕ ಸಹಾಯಕ ದರ್ಜೆ-3, 52 ಚಾರ್ಜ್ ಮನ್ ಅತಿ ಹೆಚ್ಚಿನ ಹುದ್ದೆಗಳಾಗಿವೆ. ಈ ಹುದ್ದೆಗಳಿಗೆ ವಿದ್ಯಾರ್ಹತೆ, ವೇತನ ಶ್ರೇಣಿ, ಇಲಾಖೆ ಮತ್ತು ವೃಂದವಾರು ವರ್ಗೀಕರಣ ಹಾಗೂ ಪರೀಕ್ಷೆ ಸೇರಿ ಇತರೆ ಮಾಹಿತಿಗಳನ್ನು ಸದ್ಯದಲ್ಲಿಯೇ ಪ್ರಕಟಿಸಲಿದೆ. ಈ ಹುದ್ದೆಗಳ ಸಂಖ್ಯೆ ಮತ್ತು ವೃಂದ ತಾತ್ಕಾಲಿಕವಾಗಿದೆ ಎಂದು ತಿಳಿಸಿದೆ.