

Sahitya Akademi: ಆರ್.ದಿಲೀಪ್ ಕುಮಾರ್ ಅವರ "ಪಚ್ಚೆಯ ಜಗುಲಿ" ವಿಮರ್ಶಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2025ರ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ಪುರಸ್ಕೃತರಿಗೆ 50,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಮುಂಬರುವ ದಿನಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಅಕಾಡೆಮಿ ತಿಳಿಸಿದೆ.
ದಿಲೀಪ್ ಕುಮಾರ್ ಚಾಮರಾಜನಗರ ಜಿಲ್ಲೆಯವರಾಗಿದ್ದು, ಈ ಹಿಂದೆ ಹಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಇದೀಗ ಕಾವ್ಯ, ವಿಮರ್ಶೆ, ಭಾಷಾಂತರ, ಸಂಶೋಧನೆ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಯು.ಜಿ.ಸಿ ಸೆಮಿನಾರ್ಗಳಲ್ಲಿ ಸಂಶೋಧನಾ ಲೇಖನಗಳನ್ನು ಮಂಡಿಸಿದ್ದು ಅವರ ಲೇಖನಗಳು ಮೆಚ್ಚುಗೆ ಪಡೆದಿವೆ.
"ಹಾರುವ ಹಂಸೆ" ಕವನ ಸಂಕಲನವು ಕನ್ನಡ ಪುಸ್ತಕ ಪ್ರಾಧಿಕಾರದ ಧನಸಹಾಯ ಯೋಜನೆಯ ಅಡಿಯಲ್ಲಿ ಗೋಮಿನೀ ಪ್ರಕಾಶನದಿಂದ ಪ್ರಕಟವಾಗುತ್ತಿರುವ ಇವರ ಮೊದಲ ಕವನ ಸಂಕಲನವಾಗಿದೆ.