

ಬೆಂಗಳೂರು: ಇಂದಿನ 'ವಿಜಯವಾಣಿ' ಪತ್ರಿಕೆಯಲ್ಲಿ ಪ್ರಕಟವಾದ 'ತೆಲಂಗಾಣಕ್ಕೆ ನಿಗಮದ ಹಣ' ವರದಿಯನ್ನು ಉಲ್ಲೇಖಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್. ಅಶೋಕ, ಕನ್ನಡಿಗರ ಹಣ 'ಕೈ' ಹೈಕಮಾಂಡ್ಗೆ ಟಕಾಟಕ್ ವರ್ಗಾವಣೆಯಾಗಿದೆ ಎಂದು ಆರೋಪಿಸಿದ್ದಾರೆ.
"ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಎಟಿಎಂ ಸರ್ಕಾರ (#ATMSarkara) ಆಗಿದೆ ಅನ್ನುವುದಕ್ಕೆ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ಹಣ ಟಕಾಟಕ್ ಅಂತ ತೆಲಂಗಾಣಕ್ಕೆ ವರ್ಗಾವಣೆ ಆಗಿರುವುದೇ ಸಾಕ್ಷಿ" ಎಂದಿದ್ದಾರೆ.
"ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ, ಕುರ್ಚಿ ದಕ್ಕಿಸಿಕೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಪೈಪೋಟಿಗೆ ಬಿದ್ದಂತೆ ಕನ್ನಡಿಗರ ಹಣವನ್ನು ಯದ್ವಾತದ್ವಾ ಲೂಟಿ ಮಾಡಿ ಹೈಕಮಾಂಡ್ ಗೆ ಸಾಗಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಕಳ್ಳ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ" ಎಂದು ಕಿಡಿಕಾರಿದ್ದಾರೆ.