

ಬೆಂಗಳೂರು: ಇಂದು 'ವಿಜಯವಾಣಿ' ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ 'ಸರ್ಕಾರಿ ಶಾಲೆಗಳಿಗೆ ಕತ್ತಲೆ ಭಾಗ್ಯ' ವಿಶೇಷ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಸಂಸ್ಕಾರವಂತರಿಂದ ಉತ್ತಮ ಸಮಾಜ ನಿರ್ಮಾಣ
"ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಎಲ್ಲವೂ ಅಯೋಮಯವಾಗಿದ್ದು, ಮುಖ್ಯಮಂತ್ರಿಗಳ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಪೂರೈಕೆ ಮಾಡುವಂತೆ ಸ್ಪಷ್ಟ ಆದೇಶವಿದ್ದರೂ ಸಹ ಅದನ್ನು ಉಲ್ಲಂಘನೆ ಮಾಡಿರುವ ಇಂಧನ ಇಲಾಖೆ ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಡ ಹೇರುವ ಜೊತೆಗೆ ಹಲವು ಶಾಲೆಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿದೆ" ಎಂದರು.
"ಈ ತಗಡು ಕಾಂಗ್ರೆಸ್ ಸರ್ಕಾರದಲ್ಲಿ ಇಲಾಖೆಗಳ ಮಧ್ಯೆ ತಾಳಮೇಳವೂ ಇಲ್ಲ, ಅಧಿಕಾರಿಗಳ ನಡುವೆ ಸಮನ್ವಯತೆಯೂ ಇಲ್ಲ" ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.