ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಇದು ಕಾನೂನು ಬಾಹಿರ ಕ್ರಮ ಎಂದ ವಿಪಕ್ಷ ನಾಯಕ ಆರ್​. ಅಶೋಕ್

R Ashok
Published on

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ಕೇಂದ್ರಿಯಾ ತನಿಖಾ ಸಂಸ್ಥೆ(CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ಮುಂದಾಗಿರುವ ಕುರಿತು ವಿಪಕ್ಷ ಬಿಜೆಪಿ​ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ ಎಂದು ಆರೋಪಿಸಿದ್ದಾರೆ.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದನ್ನು ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net