ಯಡಿಯೂರಪ್ಪ ಜೈಲಿಗೆ ಹೋಗಲು ಕಾಂಗ್ರೆಸ್ ಕಾರಣ: ಆರ್.ಅಶೋಕ್ ವಾಗ್ದಾಳಿ

r ashok
Published on

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ಚಿತಾವಣೆ ಹೂಡಿ, ಜೈಲಿಗೆ ಕಳುಹಿಸಿತು. ಇದಕ್ಕಾಗಿ ರಾಜಭವನ ಹಾಗೂ ಸಿಬಿಐ ದುರ್ಬಳಕೆ ಮಾಡಿಕೊಂಡಿತು ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಯಡಿಯೂರಪ್ಪ ಅವರ ಬಗ್ಗೆ ಎಲ್ಲಿಲ್ಲದ ಪ್ರೀತಿ ತೋರಿಸುತ್ತಿರುವ ಕಾಂಗ್ರೆಸ್ ನಾಯಕರು ಆಗ ಜೈಲಿಗೆ ಕಳುಹಿಸಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಯಡಿಯೂರಪ್ಪ ನಮ್ಮ ನಾಯಕ, ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಈಗಾಗಲೇ ಬಿಎಸ್ ವೈ ಹೇಳಿದ್ದಾರೆ. ಪಕ್ಷದ ಮೂರು ಸಮೀಕ್ಷಾ ವರದಿಗಳ ಪ್ರಕಾರ ಸ್ಥಾನ ಗಳಿಕೆಯಲ್ಲಿ ಬಿಜೆಪಿ ನಂಬರ್ 1 ಸ್ಥಾನದಲ್ಲಿದೆ. ವಿಜಯ ಸಂಕಲ್ಪ ಯಾತ್ರೆಯಿಂದ ದೊಡ್ಡ ಅಲೆ ಸೃಷ್ಟಿಯಾಗಿ ನಿಚ್ಚಳ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net