ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಹರಿತವಾದ ಆಯುಧ ಇರಿದ ದುಷ್ಕರ್ಮಿಗಳು

Atrocity
Published on

ಜೈಪುರ: ರಾಜಸ್ಥಾನದ ಅಲ್ವಾರ್​ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, 16 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಗುಪ್ತಾಂಗಕ್ಕೆ ಹರಿತವಾದ ಆಯುಧದಿಂದ ಇರಿದು, ಸೇತುವೆಯಿಂದ ಕೆಳಗೆ ಬೀಸಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆಯು ವಿಶೇಷ ಚೇತನ ಹುಡುಗಿಯಾಗಿದ್ದು, ಈ ವಾರದ ಆರಂಭದಲ್ಲಿ ಅಲ್ವಾರ್‌ನ ತಿಜಾರಾ ಮೇಲ್ಸೇತುವೆಯ ಕೆಳಗೆ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಳು. ಮಂಗಳವಾರ ಆಕೆಯನ್ನು ಅಲ್ವಾರ್​ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರ ಸಾಕಷ್ಟು ಪ್ರಯತ್ನಗಳ ನಡುವೆ ಆಕೆ ಚೇತರಿಸಿಕೊಳ್ಳದಿದ್ದಾಗ ಹೆಚ್ಚಿನ ಚಿಕಿತ್ಸೆಗೆಂದು ಆಕೆಯನ್ನು ಬುಧವಾರ ಜೈಪುರದ ಜೆಕೆ ಲಾನ್​ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಸುಮಾರು ಎರಡೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ, ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ, ಆಕೆಯ ಗುಪ್ತಾಂಗದಲ್ಲಿ ಇರಿಯಲಾಗಿದ್ದ ಹರಿತ ಆಯುಧವನ್ನು ವೈದ್ಯರು ಹೊರತೆಗೆದಿದ್ದಾರೆ. ಆಯುಧದಿಂದ ಆಕೆಯ ಆಂತರಿಕ ಅಂಗಗಳಿಗೆ ಗಂಭೀರವಾದ ಗಾಯಗಳನ್ನು ಉಂಟುಮಾಡಿದೆ ಎಂದು ತಿಳಿಸಿದ್ದಾರೆ.

ಸದ್ಯದ ಮಾಹಿತಿಯ ಪ್ರಕಾರ, ಬಾಲಕಿಯ ಆಂತರಿಕ ಅಂಗಗಳು ಹಾನಿಗೊಳಗಾಗಿದ್ದು, ಪ್ರಸ್ತುತ ಆಕೆ ಜೆಕೆ ಲೋನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಬಾಲಕಿಯ ದೇಹದ ಆಂತರಿಕ ಅಂಗಗಳಿಗೆ ಹಲವಾರು ಆಳವಾದ ಗಾಯಗಳಾಗಿವೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net