ಜಾನುವಾರು ಮೇಯಿಸ್ತಿದ್ದ ಬಾಲಕಿಯನ್ನು ಪೊದೆಯೊಳಗೆ ಎಳೆದೊಯ್ದ ಕಿರಾತಕರು ಕ್ರೈಂಗೂ ಮುನ್ನ ಸಿಕ್ಕಿಬಿದ್ದಿದ್ದೇ ರೋಚಕ!

AP Youth
Published on

ವಿಜಯವಾಡ: ಜಾನುವಾರುಗಳನ್ನು ಮೇಯಿಸುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಚಾಬ್ರೋಲ್​ ಮಂಡಲದ ಮಂಚಲಾ ಗ್ರಾಮದಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿಯು ಗ್ರಾಮದ ಸಮೀಪದಲ್ಲಿಯೇ ಜಾನುವಾರುಗಳನ್ನು ಮೇಯಿಸುತ್ತಿದ್ದಳು. ಅಲ್ಲಿಯೇ ಪಕ್ಕದಲ್ಲಿದ್ದ ಸೇತುವೆಯೊಂದರ ಕೆಳಗೆ ಆರೋಪಿ ಯುವಕರು ಮದ್ಯ ಸೇವಿಸುತ್ತಾ ಕುಳಿತಿದ್ದರು. ಮೊದಲೇ ಪಾನಮತ್ತರಾಗಿದ್ದ ಯುವಕರು ಬಾಲಕಿಯನ್ನು ಎಳೆದುಕೊಂಡು ಹತ್ತಿರದಲ್ಲೇ ಇದ್ದ ಪೊದೆಯೊಂದರಲ್ಲಿ ರೇಪ್​ ಮಾಡಲು ಯತ್ನಿಸಿದ್ದಾರೆ.

ಬಾಲಕಿ ಸಹಾಯಕ್ಕಾಗಿ ಕೂಗಿಕೊಂಡಾಗ ದಾರಿಹೋಕರು ಅದನ್ನು ಗಮನಿಸಿ ಆಕೆಯನ್ನು ರಕ್ಷಿಸಿ, ಕಿರಾತಕರನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಚಾಬ್ರೋಲ್​ ಮಂಡಲದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳ್ಕಕೆ ಆಗಮಿಸಿದ ಪೊಲೀಸರು ಆರೋಪಿ ಮತ್ತು ಸಂತ್ರಸ್ತೆಯನ್ನು ಜತೆಗೆ ಕರೆದೊಯ್ದು ವಿಚಾರಣೆ ನಡೆಸಿ ದೂರು ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net