ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಗೋರಖ್​ಪುರ್ ಕ್ಷೇತ್ರದಿಂದ ಸಿಎಂ ಯೋಗಿ ಸ್ಪರ್ಧೆ

yogi
Published on

ಲಖನೌ: ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆ ತೆರೆಬಿದ್ದಿದೆ. ಗೋರಖ್​ಪುರ್ (ನಗರ ಕ್ಷೇತ್ರ) ವಿಧಾನಸಭಾ ಕ್ಷೇತ್ರದಿಂದ ಸಿಎಂ ಯೋಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಬಿಡುಗಡೆಯಾದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿಎಂ ಯೋಗಿ ಸ್ಪರ್ಧಿಸುವ ಕ್ಷೇತ್ರ ಬಹಿರಂಗವಾಗಿದೆ. ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಮೊದಲ ಹಂತದ 58 ಸ್ಥಾನಗಳಿಗೆ 57 ಅಭ್ಯರ್ಥಿಗಳ ಪಟ್ಟಿ ಮತ್ತು ಎರಡನೇ ಹಂತದ 55 ಸ್ಥಾನಗಳಿಗೆ 38 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್​ ಮೌರ್ಯ ಅವರು ಪ್ರಯಾಗರಾಜ್​ ಜಿಲ್ಲೆಯ ಸಿರಾಥು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.

ಉತ್ತರಪ್ರದೇಶದಲ್ಲಿ ಫೆ.10ರಿಂದ ಮಾ. 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜ. 15ರ ವರೆಗೂ ರಾಜಕೀಯ ಪಕ್ಷಗಳಿಗೆ ಭೌತಿಕ ಪ್ರಚಾರ, ರೋಡ್‌ಶೋಗಳಿಗೆ ಅವಕಾಶ ಇರುವುದಿಲ್ಲ. ನಂತರ ಆ ಸಮಯದ ಪರಿಸ್ಥಿತಿಗೆ ಅನುಗಣವಾಗಿ ಹೊಸ ಸೂಚನೆಗಳನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net