ಆಕಸ್ಮಿಕ ಘಟನೆಗೆ ಹಾರಿಹೋಯ್ತು ನಾಲ್ವರು ಮಕ್ಕಳ ಪ್ರಾಣ ಪಕ್ಷಿ: ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

Children
Published on

ವಿಶಾಖಪಟ್ಟಣ: ನೀರಿನ ಹಳ್ಳ ದಾಟುವಾಗ ಆಕಸ್ಮಿಕವಾಗಿ ಅದರೊಳಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ವಿ. ಮಡುಗುಲಾ ಮಂಡಲ್​ ಜಮ್ಮದೇವಿಪೇಟಾ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್​ (7) ಎಂದು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ ಪಾಲಕರು ಬಟ್ಟೆ ಹೊಗೆಯಲು ಹೋಗಿದ್ದರು. ಮಕ್ಕಳು ಸಹ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳದ ಒಳಗೆ ಬಿದ್ದು ನೀರಿನಲ್ಲಿ ಮುಳುಗಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net