ಹೊರಗಡೆ ಹೋಗಿ ಮನೆಗೆ ಬಂದಾಗ ಕಾದಿತ್ತು ಶಾಕ್​: ಮಗಳ ಸ್ಥಿತಿಯನ್ನು ಕಂಡು ಕುಸಿದುಬಿದ್ದ ಪಾಲಕರು

Collage Student
Published on

ತ್ರಿಸ್ಸೂರ್​: ಯುವತಿಯೊಬ್ಬಳು ತನ್ನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಸ್ಸೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಶಾಂತವನ (19) ಎಂದು ಗುರುತಿಸಲಾಗಿದೆ.

ಮೃತ ಶಾಂತವನ ಇರಿಂಜಲಕುಡ ಮೂಲದ ನಿವಾಸಿ. ಈಕೆ ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಪೂರ್ವ ವಿದ್ಯಾರ್ಥಿನಿಯಾಗಿದ್ದಳು.

ಜ್ಯೋತಿ ಪ್ರಕಾಶ್​ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಗುರುವಾರ 11.30ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಮೃತದೇಹವನ್ನು ಇರಿಂಜಲಕುಡದಲ್ಲಿರುವ ಸಾರ್ವಜನಿಕ ಆಸ್ಪತರರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ. ಈ ಸಂಬಂಧ ಕಟ್ಟೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆ ನಡೆದಾಗ ಆಕೆಯ ಪಾಲಕರು ಮನೆಯಲ್ಲಿ ಇರಲಿಲ್ಲ. ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಸ್ಸೂರ್​ ಮೆಡಿಕಲ್​ ಕಾಲೇಜಿಗೆ ಸ್ಥಳಾಂತರ ಮಾಲಾಗಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net