ಸೇನಾ ಹೆಲಿಕಾಪ್ಟರ್​ ಪತನ: ಸೇನಾ ಮುಖ್ಯಸ್ಥರಿದ್ದ ಕಾಪ್ಟರ್​ ಪತನಕ್ಕೂ ಮುನ್ನ ಕೊನೇ ದೃಶ್ಯ ಲಭ್ಯ

Bipin Rawat
Published on

ನವದೆಹಲಿ: ನಿನ್ನೆ (ಡಿಸೆಂಬರ್​ 8) ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನಕ್ಕೂ ಮುನ್ನ ಹೆಲಿಕಾಪ್ಟರ್​ ಪ್ರಯಾಣದ ಅಂತಿಮ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ.

ಕನೂರಿಗೆ ಆಗಮಿಸುವ ಕೆಲವೇ ಹೊತ್ತಲ್ಲೇ ಆಗಸದಲ್ಲೇ ಮಂಜಿನ ನಡುವೆ ಮರೆಯಾಗುವ ಹೆಲಿಕಾಪ್ಟರ್​ನ ದೃಶ್ಯವನ್ನು ಅಲ್ಲಿನ ಸ್ಥಳೀಯರೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲಡೆ ವೈರಲ್​ ಆಗುತ್ತಿದೆ.

ನಿನ್ನೆ ವೆಲ್ಲಿಂಗ್ಟನ್‌ನ ಮಿಲಿಟರಿ ಶಾಲೆಯಲ್ಲಿ ನಿಗದಿಯಾಗಿದ್ದ ಸೆಮಿನಾರ್​ಗೆಂದು ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ಸೇರಿದಂತೆ 14 ಮಂದಿ ಬುಧವಾರ ರಷ್ಯಾ ನಿರ್ಮಿತ ಸೇನಾ ಹೆಲಿಕಾಪ್ಟರ್ Mi-17V5 ​ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಹೆಲಿಕಾಪ್ಟರ್​ ಪತನಗೊಂಡು ಬಿಪಿನ್​ ರಾವತ್​ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಸಿಡಿಎಸ್​ ಬಿಪಿನ್​ ರಾವತ್​ ನಿಧನಕ್ಕೇ ಇಡೀ ದೇಶವೇ ಕಂಬನಿ ಮಿಡಿದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net