

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಇಂದು (ಅ.13) ಸಂಜೆ 6.15ಕ್ಕೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಕಳೆದ ಎರಡು ದಿನಗಳಿಂದ ಮನಮೋಹನ್ ಸಿಂಗ್ ಅವರು ಸಣ್ಣ ಜ್ವರದಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮನಮೋಹನ್ ಸಿಂಗ್ ಅವರನ್ನು ಏಮ್ಸ್ನ ಕಾರ್ಡಿಯೋ-ನ್ಯೂರೋ ಟವರ್ಗೆ ಕರೆದೊಯ್ಯಲಾಗಿದ್ದು, ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿವೆ. ಕಳೆದ ಏಪ್ರಿಲ್ನಲ್ಲಿ ಮನಮೋಹನ್ ಸಿಂಗ್ ಅವರು ಕೋವಿಡ್ ಪಾಸಿಟಿವ್ನಿಂದಾಗಿ ಏಮ್ಸ್ಗೆ ದಾಖಲಾಗಿ ಗುಣಮುಖರಾಗಿ ವಾಪಾಸ್ಸಾಗಿದ್ದರು. (ಏಜೆನ್ಸೀಸ್)