ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ: ಪಲ್ಟಿಯಾಗಿ ಇನ್ನೊಂದು ಕಾರಿಗೆ ಡಿಕ್ಕಿ

Car
Published on

ಡೆಹ್ರಾಡೂನ್​: ಉತ್ತರಾಖಂಡದ ಆರೋಗ್ಯ ಸಚಿವ ಧಾನ್​ ಸಿಂಗ್​ ರಾವತ್​ ಅವರಿದ್ದ ಕಾರು ಮಂಗಳವಾರ ಸಂಜೆ ಅಪಘಾತಕ್ಕೀಡಾಗಿದೆ. ರಾವತ್​ ಅವರು ತಮ್ಮ ಸಿಬ್ಬಂದಿಯೊಂದಿಗೆ ತಲಿಸ್ಮಾನ್​ ಪಟ್ಟಣದಿಂದ ಡೆಹ್ರಾಡೂನ್​​ಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೋದಲ್ಲಿ ಸಚಿವರು ಕಾರು ಉರುಳಿಬಿದ್ದು ಪಕ್ಕದಲ್ಲಿ ಪಾರ್ಕ್​ ಮಾಡಿರುವ ಕಾರಿಗೆ ಗುದ್ದಿ ಒರಗಿಕೊಂಡು ನಿಂತಿರುವ ದೃಶ್ಯವನ್ನು ಕಾಣಬಹುದು.

ಘಟನೆಯಲ್ಲಿ ಸಚಿವರು ಸಣ್ಣಪುಟ್ಟ ಗಾಯಗಳಿಂದ ಬಚಾವ್​ ಆಗಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ಪ್ಯಾಬೊ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಸಚಿವರ ಕೆಲ ಸಿಬ್ಬಂದಿಗಳಿಗೂ ಅಲ್ಪ ಪ್ರಮಾಣ ಗಾಯಗಳಾಗಿದ್ದು, ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net