

ಹುಬ್ಬಳ್ಳಿ: ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಶುಕ್ರವಾರ (ಅ.07) ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಹೊನ್ನಾಳಿ ಅವರು ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದರು. ಮೃತರ ಸಾವಿಗೆ ಅನೇಕ ರಾಜಕೀಯ ಮುಖಂಡರು ಹಾಗೂ ಬಂಧು ಬಳಗದವರು ಕಂಬನಿ ಮಿಡಿದಿದ್ದಾರೆ. (ದಿಗ್ವಿಜಯ ನ್ಯೂಸ್)