

ನವದೆಹಲಿ: ಉದ್ಯೋಗ ಆಕಾಂಕ್ಷಿಗಳಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದೊಳಗೆ 10 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡುವಂತೆ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಪ್ರಧಾನಿ ಮೋದಿ ನಿರ್ದೇಶನ ನೀಡಿರುವುದಾಗಿ ಪ್ರಧಾನಿ ಕಚೇರಿ ಮಂಗಳವಾರ ತಿಳಿಸಿದೆ.
ಎಲ್ಲ ಸರ್ಕಾರಿ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ ಮಾನವ ಸಂಪನ್ಮೂಲದ ಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಪ್ರಧಾನಿ ಮೋದಿ 10 ಲಕ್ಷ ಉದ್ಯೋಗ ನೇಮಕಾತಿಗೆ ಸೂಚನೆ ನೀಡಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರವು ನೇಮಕಾತಿ ಮಾಡುವಂತೆ ಸೂಚನೆ ನೀಡಿದರು ಎಂದು ಪಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ. (ಏಜೆನ್ಸೀಸ್)