ಚಾಕೊಲೇಟ್​ ಕೊಳ್ಳಲು ಹಣದ ಭರವಸೆ ನೀಡಿ 4 ವರ್ಷದ ಬಾಲಕಿ ಮೇಲೆ 12ರ ಬಾಲಕನಿಂದ ಲೈಂಗಿಕ ದೌರ್ಜನ್ಯ

Child
Published on

ಪುಣೆ: ಚಾಕೊಲೇಟ್​ ಖರೀದಿಸಿಲು ಹಣ ಕೊಡುವ ಭರವಸೆ ನೀಡಿ ನಾಲ್ಕು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಬಾಲಕಿ ವಾಸವಿದ್ದ ಮನೆಯ ಪಕ್ಕದಲ್ಲೇ ಇದ್ದ ಬಾಲಕನಿಂದ ಈ ಕೃತ್ಯ ನಡೆದಿದೆ. ಮನೆಯಿಂದ ಆಟವಾಡಲು ಬಂದ ಬಾಲಕಿಗೆ ಚಾಕೊಲೇಟ್​ ಆಸೆವೊಡ್ಡಿ ಬಾಲಕ ದುರ್ಬಳಕೆ ಮಾಡಿಕೊಂಡಿದ್ದಾನೆ.

ಈ ಘಟನೆ ಕಳೆದ ವಾರವೇ ನಡೆದಿದ್ದು, ಈ ಸಂಬಂಧ ಶನಿವಾರ ಪುಣೆಯ ಪಿಂಪ್ರಿ ಚಿಂಚವಾಡ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ ಮತ್ತು ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಬಾಲಕ ತನ್ನ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆಂದು ಬಾಲಕಿಯ ಪಾಲಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net