

ಶಿವಮೊಗ್ಗ: ಇಂದು ಶಿವಮೊಗ್ಗಕ್ಕೆ ಆಗಮಿಸಿದ ವೀರ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಭೇಟಿ ಮಾಡಿ ಉಭಯಕುಶಲೋಪರಿ ನಡೆಸಿದರು.
ಶಿವಮೊಗ್ಗದಲ್ಲಿ ಇಂದು ಸಂಜೆ ನಡೆಯಲಿರುವ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಸಾತ್ಯಕಿ ಸಾವರ್ಕರ್ ಭಾಗಿಯಾಗಲಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಶ್ರೀಗಂಧ ಸಂಸ್ಥೆ ಹಾಗೂ ಸಾಮಗಾನ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.