ನಾನಿಲ್ಲಿ ಓದುವುದಿಲ್ಲ... ಖಾಸಗಿ ಕಾಲೇಜಿಗೆ ಸೇರಿಸಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡ ಯುವತಿ!

Tlg Girl
Published on

ಹೈದರಾಬಾದ್​: ಖಾಸಗಿ ಕಾಲೇಜಿಗೆ ಸೇರಿಸಲಿಲ್ಲ ಅಂತಾ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ತಲಮಾದ್ರಿಯಲ್ಲಿ ಗುರುವಾರ ನಡೆದಿದೆ.

ಪೂಜಾ (19) ಮೃತ ಯುವತಿ. ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ತಲಮಾದ್ರಿಯಲ್ಲಿರುವ ಖಾಸಗಿ ಕಾಲೇಜಿಗೆ ಸೇರಿಸದೇ ಸರ್ಕಾರಿ ಕಾಲೇಜಿಗೆ ಸೇರಿಸಿದರು ಎಂದು ಮನನೊಂದು ಪೂಜಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಲಮಾದ್ರಿ ಎಸ್ಐ ಉದಯ್​ಕುಮಾರ್​ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿದ್ದ ಮಹಿಳಾ ಕಾಲೇಜಿನಲ್ಲಿ ಓದಲು ಪೂಜಾಗೆ ಇಷ್ಟವಿರಲಿಲ್ಲ. ಹೀಗಾಗಿ ಖಾಸಗಿ ಕಾಲೇಜಿಗೆ ಕಳುಹಿಸುವಂತೆ ಒತ್ತಾಯ ಮಾಡುತ್ತಿದ್ದ ಪೂಜಾ ಎರಡು ತಿಂಗಳು ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದಳು. ಗುರುವಾರ ಕುಟುಂಬಸ್ಥರು ಕೆಲಸಕ್ಕೆಂದು ಹೊರಗಡೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸಂಬಂಧ ದೂರು ದಾಖಲಿಸಿಕೊಂಡಿರುವ ತಲಮಾದ್ರಿ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net