ಕೇಂದ್ರ ಬಜೆಟ್​ 2022: 60 ಲಕ್ಷ ಉದ್ಯೋಗ ಸೃಷ್ಟಿಸುವುದೇ ಸರ್ಕಾರದ ಮುಂದಿನ ಗುರಿ: ನಿರ್ಮಲಾ ಸೀತಾರಾಮನ್​

Job Creation
Published on

ನವದೆಹಲಿ: ವಿತ್ತ ಸಚಿವೆಯಾಗಿ ನಾಲ್ಕನೇ ಬಜೆಟ್​ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್​ ಅವರು ಯುವಕರಿಗೆ ಗುಡ್​ ನ್ಯೂಸ್​ ನೀಡಿದ್ದಾರೆ. ಮುಂದಿನ ಐದು ವರ್ಷದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಭರವಸೆಯನ್ನು ನೀಡಿದ್ದಾರೆ.

ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದೇ ಸರ್ಕಾರದ ಗುರಿಯಾಗಿದೆ. ಇದರ ಜೊತೆಗೆ 30 ಲಕ್ಷ ಹೆಚ್ಚುವರಿ ಉತ್ಪಾದನೆಯನ್ನು ಸಾಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ಹೇಳಿದರು.

ಯುವ ಜನಾಂಗವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸುತ್ತಿದೆ. ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯು ದೇಶದ ಆರ್ಥಿಕತೆಯನ್ನು ಉತ್ತೇಜಿಸಲಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ ಎಂದು ವಿತ್ತ ಸಚಿವೆ ಹೇಳಿದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net