ಜೈಲಿನಲ್ಲಿರುವ ನಟ ದರ್ಶನ್‌ರನ್ನು ಭೇಟಿಯಾದ ರಚಿತಾ ರಾಮ್!

darshan
Published on

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 'ಚಾಲೆಂಜಿಂಗ್ ಸ್ಟಾರ್‌' ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಆತನನ್ನು ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ, ಕೊಲೆ ಮಾಡಿದ ಆರೋಪ ನಟ ದರ್ಶನ್ & ಗ್ಯಾಂಗ್ ಮೇಲಿದೆ. ಈ ಮಧ್ಯೆ ಜೈಲಿನಲ್ಲಿರುವ ದರ್ಶನ್ ಅವರನ್ನು ಮೊದಲ ಬಾರಿಗೆ ನಟಿ ರಚಿತಾ ರಾಮ್ ಭೇಟಿಯಾಗಿ ಬಂದಿದ್ದಾರೆ.

ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆದ ಬಳಿಕ ಇದೇ ಮೊದಲ ಬಾರಿಗೆ ರಚಿತಾ ರಾಮ್ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್, ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಕೂಡ ನಟನನ್ನು ನೋಡಲು ಜೈಲಿಗೆ ಬಂದಿದ್ದಾರೆ.

Darshan

ನಟ ದರ್ಶನ್ ಮತ್ತು ರಚಿತಾ ರಾಮ್​ ಇಬ್ಬರು ಜೊತೆಗೆ ಬುಲ್‌ ಬುಲ್‌ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ದರ್ಶನ್ ಜೈಲಿನಲ್ಲಿ ಇರುವುದನ್ನು ಕಂಡು ನಟಿ ರಕ್ಷಿತಾ ಭಾವುಕರಾಗಿದ್ದರು.

ದರ್ಶನ್‌ ಸರ್‌ ನನಗೆ ಗುರು ಸಮಾನರು: ರೇಣುಕಾಸ್ವಾಮಿ ಕೊಲೆ ದರ್ಶನ್ ಅರೆಸ್ಟ್ ಆದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಮಸ್ಕಾರ, ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾ ಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನಮಗಿದೆ" ಎಂದು ರಚಿತಾ ರಾಮ್‌ ಪೋಸ್ಟ್‌ ಮಾಡಿದ್ದರು.

Darshan

"ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತದೆ" ಎಂದು ರಚಿತಾ ರಾಮ್‌ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.

Vijayalakshmi Darshan

ನಟಿ ರಚಿತಾ ರಾಮ್‌ ಸಿನಿಮಾಗಳು: ಇವರ ಮೂಲ ಹೆಸರು ಬಿಂದ್ಯಾ ರಾಮ್. ಮೊದಲಿಗೆ ಅರಸಿ ಎಂಬ ಸೀರಿಯಲ್‌ ಮೂಲಕ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಇದಾದ ಬಳಿಕ ಬುಲ್‌ ಬುಲ್‌ ಸಿನಿಮಾದಲ್ಲಿ ದರ್ಶನ್‌ ಜತೆ ನಾಯಕಿಯಾಗಿ ನಟಿಸಿದರು. ಇದಾದ ಬಳಿಕ ದಿಲ್‌ ರಂಗೀಲಾ, ಅಂಬರೀಶಾ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಬುಲ್‌ ಬುಲ್‌, ದಿಲ್‌ ರಂಗೀಲಾ, ಅಂಬರೀಶಾ, ರನ್ನ, ರಥಾವರ, ಚಕ್ರವ್ಯೂಹ, ಭರ್ಜರಿ, ಪುಷ್ಪಕ ವಿಮಾನ, ಸೀತಾರಾಮ ಕಲ್ಯಾಣ, ನಟ ಸಾರ್ವಭೌಮ, ಆಯುಷ್ಮಾನ್‌ ಭವ ಮುಂತಾದ ಸಿನಿಮಾಗಳಲ್ಲಿ ನಟಿ ರಚಿತಾ ರಾಮ್‌ ನಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net