ಮುಖವಾಡ ಹಾಕಿದ ಫೇಕ್​ ಜನರು ವರ್ಚಸ್ಸನ್ನು ಕಾಯ್ದುಕೊಳ್ಳಬೇಕು ಆದರೆ...: ನಟಿ ರಚಿತಾ ರಾಮ್​

Rachita Ram
Published on

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಡಿಂಪಲ್​ ಕ್ವೀನ್​ ರಚಿತಾ ರಾಮ್​ ತಮ್ಮ ಅಭಿನಯ ಹಾಗೂ ವಿಭಿನ್ನ ಮ್ಯಾನರಿಸಂ ಮೂಲಕ ಕನ್ನಡ ಮಾತ್ರವಲ್ಲೇ ಪರಭಾಷೆಗಳಲ್ಲೂ ಡಿಮ್ಯಾಂಡ್​ ಹೆಚ್ಚಿಸಿಕೊಂಡಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​​ ಆಗಿರುವ ರಚ್ಚು ಸದಾ ಜನರ ಸೆಳೆಯುತ್ತಿರುತ್ತಾರೆ. ಇದೀಗ ಒಂದು ಪೋಸ್ಟ್​ ಮೂಲಕ ಅಭಿಮಾನಿಗಳ ತಲೆ ಕೆಡಿಸಿರುವ ರಚ್ಚು ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಮುಖವಾಡ ಹಾಕಿದ ಫೇಕ್​ ಜನರು ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ ಎಂದು ಪೋಸ್ಟ್​ ಮಾಡಿದ್ದಾರೆ. ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದ್ದು, ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ| ಈ ಬಗ್ಗೆ ಅಭಿಮಾನಿಗಳು ಕಮೆಂಟ್​ ಮಾಡಿ ಏಕೆ ಎಂದು ಪ್ರಶ್ನಿಸುತ್ತಿದ್ದಾರೆ.

ದರ್ಶನ್​ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುವ ಮೊದಲು ಪರಪ್ಪನ ಅಗ್ರಹಾರದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ ಭಾವುಕರಾಗಿದ್ದರು. ಅನೇಕರು ಈ ವಿಚಾರವನ್ನು ಮುಂದಿಟ್ಟುಕೊಂಡು ಟ್ರೋಲ್​ ಮಾಡಿದ್ದರು. ಈ ವಿಚಾರವಾಗಿ ಅವರು ಈ ಪೋಸ್ಟ್​ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಂಜು ವೆಡ್ಸ್​ ಗೀತಾ-2 ಚಿತ್ರದ ಶೂಟಿಂಗ್​ ಮುಗಿಸಿರುವ ರಚಿತಾ ರಾಮ್​ ಸಚಿವ ಜಮೀರ್​ ಅಹ್ಮದ್​ ಅವರ ಪುತ್ರ ಝೈದ್​ ಖಾನ್​ ನಟನೆಯ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net