

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ 135ನೇ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಸೆ. 5ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಉದ್ಘಾಟಿಸುವರು. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ವಿಪ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಸಂಸದ ಶಿವಕುಮಾರ ಉದಾಸಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.