ವಿಜಯೇಂದ್ರ ಅವರಿಗೆ ಸಿಹಿ ತಿನ್ನಿಸಿದ ಬರ್ತ್‌ಡೇ ಬಾಯ್ ರಾಘವೇಂದ್ರ

birth day
Published on

ಶಿವಮೊಗ್ಗ: ಜನ್ಮ ದಿನದ ಹಿನ್ನೆಲೆಯಲ್ಲಿ ಶುಭ ಕೋರಿದ ಸಹೋದರ ಬಿ.ವೈ.ವಿಜಯೇಂದ್ರ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸಿಹಿ ಹಂಚಿದರು. ಬಿವೈಆರ್ ಪತ್ನಿ ತೇಜಸ್ವಿನಿ, ಪುತ್ರರಾದ ಭಗತ್ ಹಾಗೂ ಸುಭಾಷ್ ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಇನ್ನೊಂದೆಡೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ನೆಚ್ಚಿನ ನಾಯಕನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದರು. ಶಿಕಾರಿಪುರದಲ್ಲಿ ಬಿ.ವೈ.ರಾಘವೇಂದ್ರ ಕುಟುಂಬ ಸಮೇತರಾಗಿ ಹುಚ್ಚುರಾಯ ಸ್ವಾಮಿ ದೇವಾಲಯ ಹಾಗೂ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಶಿವಮೊಗ್ಗದಲ್ಲಿ ಬಿವೈಆರ್ ಅಭಿಮಾನಿಗಳು, ಬಿಜೆಪಿ ಮುಖಂಡರು ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಆಯನೂರಿನಲ್ಲೂ ಅಭಿಮಾನಿಗಳು ಪೂಜೆ ಸಲ್ಲಿಸಿದರು.

ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಅಭಿವೃದ್ಧಿಗೆ ಅನ್ವರ್ಥನಾಮವೇ ಯಡಿಯೂರಪ್ಪ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಭಿವೃದ್ಧಿ ಹರಿಕಾರ ಎಂದೇ ಜನ ಮಾತನಾಡುತ್ತಾರೆ. ಪಕ್ಷಾತೀತ, ಜಾತ್ಯಾತೀತವಾಗಿ ಪ್ರೀತಿಗೆ ಪಾತ್ರರಾಗಿದ್ದಾರೆ. ಎಲ್ಲರ ನೆಚ್ಚಿನ ರಾಘಣ್ಣ ಎಂದೆನಿಸಿಕೊಂಡಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಬಿಜೆಪಿ ಮುಖಂಡರಾದ ಎಸ್.ದತ್ತಾತ್ರಿ, ಬಳ್ಳೇಕೆರೆ ಸಂತೋಷ್, ಮಾಲತೇಶ್, ದಿವಾಕರ ಶೆಟ್ಟಿ, ರಾಜೇಶ್ ಕಾಮತ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net