

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಸೆಡ್ಡು ಹೊಡೆದು, ಸ್ಪರ್ಧಾ ಅಖಾಡದಲ್ಲಿ ಉಳಿದಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರನ್ನು ಪಕ್ಷ ಉಚ್ಚಾಟಿಸಿದೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ, ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ರಘುಪತಿ ಭಟ್ ವಿರುದ್ಧ ಶಿಸ್ತು ಕ್ರಮದ ಅಸ ಪ್ರಯೋಗಿಸಿದೆ.
ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಶನಿವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.