ಕೋರ್ಟ್‌ಗೆ ಹಾಜರಾಗುವ ರಾಹುಲ್

Rahul Gandhi
Published on

ಬೆಂಗಳೂರು: ಸಂಸದ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಸಿಟಿ ಸಿವಿಲ್ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಜತೆಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ, ಸೋತ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಸಮಾಲೋಚನೆ ನಡೆಸುವರು.

ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ರಾಹುಲ್ ಗಾಂಧಿ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಮೂವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು, ಸಿಎಂ, ಡಿಸಿಎಂ ಹಾಜರಾಗಿದ್ದು, ರಾಹುಲ್ ಗಾಂಧಿ ಅವಕಾಶ ಕೋರಿದ್ದರು. ಇದೀಗ ಹಾಜರಾಗುತ್ತಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಕೋರ್ಟ್‌ಗೆ ಆಗಮಿಸಿದ ಸಂದರ್ಭದಲ್ಲಿ ಕಾರ್ಯರ್ತರು ಪಕ್ಷದ ಧ್ವಜ ಹಿಡಿದು ಬರದಂತೆ ಮತ್ತು ಕಾಂಗ್ರೆಸ್ ಪರ ೋಷಣೆ ಹಾಕದಂತೆ ಡಿ.ಕೆ.ಶಿವಕುಮಾರ್ ವಿಡಿಯೋ ಸಂದೇಶ ಕಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net