ನನ್ನ ಜೀವನ ಸಂಗಾತಿಯಲ್ಲಿ ಅಜ್ಜಿ ಇಂದಿರಾ ಗಾಂಧಿಯ ಗುಣಗಳು ಇರಬೇಕು ಎಂದ ರಾಹುಲ್​ ಗಾಂಧಿ..!

rahul gandhi sonia gandhi
Published on

ನವದೆಹಲಿ: ಕಾಂಗ್ರೆಸ್ ನಾಯಕ, 52 ವರ್ಷ ಪ್ರಾಯದ ರಾಹುಲ್ ಗಾಂಧಿ ಬುಧವಾರ ತಮ್ಮ ಜೀವನದ ಬಗ್ಗೆ ವೈಯಕ್ತಿಕ ವಿವರಗಳನ್ನು ಸಂದರ್ಶನ ಒಂದರಲ್ಲಿ ಬಹಿರಂಗಪಡಿಸಿದ್ದು, ತಮ್ಮ ಭಾವಿ ಜೀವನ ಸಂಗಾತಿಯಿಂದ ಹಿಡಿದು ಮೋಟಾರ್‌ಸೈಕಲ್‌ಗಳ ಮೇಲಿನ ಪ್ರೀತಿಯವರೆಗೆ ಮಾತನಾಡಿದ್ದಾರೆ.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ, ತಮ್ಮ ಜೀವನ ಸಂಗಾತಿಯಲ್ಲಿ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಅವರ ಗುಣಗಳ ಮಿಶ್ರಣ ಇರಬೇಕು ಎಂದು ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು "ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ" ಎಂದು ಹೇಳಿದ್ದಾರೆ.

"ನಾನು ಮದುವೆಯಾಗುವ ಮಹಿಳೆಯಲ್ಲಿ ನನ್ನ ತಾಯಿ ಮತ್ತು ಅಜ್ಜಿಯ ಗುಣಗಳ ನಡುವಿನ ಮಿಶ್ರಣ ಇದ್ದರೆ ಒಳ್ಳೆಯದು" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಂದರ್ಶನದ ವಿಡಿಯೋವನ್ನು ಗಾಂಧಿ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net