ಕರ್ನಾಟಕದಲ್ಲಿ 136 ಸೀಟುಗಳನ್ನು ಪಡೆದಂತೆಯೇ ಮಧ್ಯಪ್ರದೇಶದಲ್ಲಿ 150 ಸೀಟು ಪಡೆಯುತ್ತೇವೆ: ರಾಹುಲ್ ಗಾಂಧಿ

rahul gandhi
Published on

ನವದೆಹಲಿ: ಮುಂಬರುವ ಮಧ್ಯಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ 136 ಸೀಟುಗಳನ್ನು ಪಡೆದಂತೆಯೇ, ಮಧ್ಯಪ್ರದೇಶದ ಚುನಾವಣೆಯಲ್ಲಿ 150 ಸೀಟುಗಳನ್ನು ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ ಚುನಾವಣೆ ಸಲುವಾಗಿ ಇಂದು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ಕಾಂಗ್ರೆಸ್ ಈ ಬಾರಿ ನಡೆಯಲಿರುವ ಮಧ್ಯಪ್ರದೇಶದ ಚುನಾವಣೆಯಲ್ಲಿ 230 ಸೀಟುಗಳ ಪೈಕಿ 150 ಸೀಟುಗಳನ್ನು ಗೆಲ್ಲುವುದು ಖಚಿತ ಎಂದು ಹೇಳಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ರಾಹುಲ್, ದಿಗ್ವಿಜಯ್ ಸಿಂಗ್, ಕಮಲ್ ನಾಥ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ಕೆಲವು ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net