

ತೌಬಲ್, ಮಣಿಪುರ: ಮಣಿಪುರದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಮರಳಿ ತರುತ್ತೇವೆ ಎಂದು ಜನರಿಗೆ ಭರವಸೆ ನೀಡುವ ಮುಖೇನ ಯಾತ್ರೆಗೆ ಅಧಿಕೃತ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ: 15ರಿಂದ ಹೊಳೆಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ಕಳೆದ ವರ್ಷ ಮೇ ತಿಂಗಳಲ್ಲಿ ಈಶಾನ್ಯ ರಾಜ್ಯದಲ್ಲಿ ಭುಗಿಲೆದ್ದ ಮಣಿಪುರ ಹಿಂಸಾಚಾರವು 180ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ. ಈ ಘಟನೆಯನ್ನು ಮುನ್ನೆಲೆಗೆ ತಂದ ರಾಹುಲ್ ಗಾಂಧಿ, ಬಿಜೆಪಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
"ಮಣಿಪುರ ರಾಜಧಾನಿ ಇಂಫಾಲ್‌ನ ದಕ್ಷಿಣ ಭಾಗದಲ್ಲಿರುವ ತೌಬಲ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಬಹುಶಃ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಮಣಿಪುರವು ಭಾರತದ ಭಾಗವೇ ಆಗಿರಲಿಲ್ಲ. ಲಕ್ಷಗಟ್ಟಲೆ ಜನರು ನಷ್ಟವನ್ನು ಎದುರಿಸಿದ್ದಾರೆ. ಆದ್ರೆ, ಪ್ರಧಾನಿ ಮಾತ್ರ ನಿಮ್ಮ ಕಣ್ಣೀರು ಒರೆಸಲು ಇಲ್ಲಿಗೆ ಬಂದಿಲ್ಲ" ಎಂದರು.
"ನಿಮ್ಮ ಕೈ ಹಿಡಿಯಲು, ನಿಮ್ಮನ್ನು ಅಪ್ಪಿಕೊಳ್ಳಲಿಲ್ಲ. ಬಹುಶಃ ನರೇಂದ್ರ ಮೋದಿ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಮಣಿಪುರ ಭಾರತದ ಭಾಗವೇ ಅಲ್ಲ" ಎಂದಿದ್ದಾರೆ,(ಏಜೆನ್ಸೀಸ್).