ರಾಯ್​ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಗಾ: ವಯನಾಡ್​ದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ!

rg
Published on

ನವದೆಹಲಿ: ಕೆಲ ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಅಂತಿಮವಾಗಿ ತೆರೆಬಿದ್ದಿದೆ. ಅಂದುಕೊಂಡಂತೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ ಕೇರಳದ ವಯನಾಡು ಲೋಕಸಭಾ ಕ್ಷೇತ್ರವನ್ನು ತೊರೆಯಲಿದ್ದು, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಉಪ ಚುನಾವಣೆಯಲ್ಲಿ ವಯನಾಡಿನಿಂದ ಕಣಕ್ಕಿಳಿಯಲಿದ್ದಾರೆ.

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕರ ಮಹತ್ವದ ಸಭೆಯಲ್ಲಿ ಈ ತೀರ್ಮಾಣಕೈಗೊಳ್ಳಲಾಗಿದೆ.

ತಮ್ಮ ತಾಯಿ ಸೋನಿಯಾ ಗಾಂಧಿ ಈವರೆಗೆ ಪ್ರತಿನಿಧಿಸುತ್ತಿದ್ದ ರಾಯ್​ ಬರೇಲಿಯಲ್ಲಿ ಈ ಬಾರಿ ರಾಹುಲ್ ಗಾಂಧಿ 6,87,649 ಮತಗಳನ್ನು ಗಳಿಸಿ ಕೇವಲ 2,97,619 ಮತ ಗಳಿಸಿದ ಬಿಜೆಪಿಯ ದಿನೇಶ್​ ಪ್ರತಾಪ್ ಸಿಂಗ್ ಅವರನ್ನು 3,90,030 ಮತಗಳಿಂದ ಭರ್ಜರಿಯಾಗಿ ಸೋಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net