

ನವದೆಹಲಿ: ಲೋಕಸಭೆ ವಿಪಕ್ಷ ನಾಯಕರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ.
ಇಂದು ಸಂಸತ್ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಯಿತು.
ಇನ್ನು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯವನ್ನು ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಾವು ಶಿಸ್ತುಬದ್ಧವಾಗಿ, ಒಗ್ಗಟ್ಟಿನಿಂದ ಇರಬೇಕು: ಖರ್ಗೆ
ನಾವು ಶಿಸ್ತಿನಿಂದ ಒಗ್ಗಟ್ಟಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಇದನ್ನು ನಾನು ನಿಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ. ಮಣಿಪುರದಲ್ಲಿ ನಾವು ಎರಡೂ ಸ್ಥಾನಗಳನ್ನು ಗೆದ್ದಿದ್ದೇವೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಸ್ಥಾನಗಳನ್ನು ಗೆದ್ದಿದ್ದೇವೆ ಎಂದರು.