

ಮೈಸೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಜನರಿಗೆ ಸಾಂತ್ವನ ಹೇಳಲು ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಮೈಸೂರು ಮೂಲಕ ವಯನಾಡಿಗೆ ತೆರಳಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 6.30ಕ್ಕೆ ಹೊರಡುವ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ 9.30ಕ್ಕೆ ತಲುಪಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಲಿದ್ದಾರೆ. ವಯನಾಡಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಜನರಿಗೆ ಸಾಂತ್ವನ ಹೇಳಿದ ನಂತರ ರಸ್ತೆ ಮಾರ್ಗವಾಗಿ ಮೈಸೂರಿಗೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.