ಖಲಿಸ್ತಾನ್ ಬೆಂಬಲಕ್ಕೆ ರಾಹುಲ್ ಗಾಂಧಿ!: ಭಯೋತ್ಪಾದಕ ಪನ್ನೂನ್ ಪ್ರತಿಕ್ರಿಯೆ..!!

pannun
Published on

ನವದೆಹಲಿ: ಸಿಖ್ಖರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳು ಸಾಕಷ್ಟು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಬಿಜೆಪಿಯ ನಾಯಕರು ತೀವ್ರವಾಗಿ ಟೀಕಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಖಲಿಸ್ತಾನ್ ಬೇಡಿಕೆಯನ್ನು ರಾಹುಲ್ ಬೆಂಬಲಿಸಿದ್ದಾರೆ ಎಂದು ಹೇಳಿ ಸಂಚಲನ ಮೂಡಿಸಿದ್ದಾನೆ.

ಅಮೆರಿಕಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತವನ್ನು ಟೀಕಿಸುತ್ತಿರುವುದರ ಜೊತೆಗೆ ಭಾರತದಲ್ಲಿ ಸಿಕ್ಕರ ಪರಿಸ್ಥಿತಿ ಗಬ್ಬೆ ಗೊಂದಲದ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್-ಎಸ್‌ಎಫ್‌ಜೆ ಮುಖಂಡ ಗುರುಪತ್ವಂತ್ ಸಿಂಗ್ ಪನ್ನೂನ್, ರಾಹುಲ್ ಗಾಂಧಿ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಗಳು ಸಿಖ್ಸ್ ಫಾರ್ ಜಸ್ಟಿಸ್‌ನ ಜಾಗತಿಕ ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಅಭಿಯಾನವನ್ನು ಬೆಂಬಲಿಸುತ್ತವೆ ಎಂದು ಪನ್ನೂನ್ ಹೇಳಿಕೆ ಬಿಡುಗಡೆ ಮಾಡಿದ್ದಾನೆ.

ರಾಹುಲ್ ಗಾಂಧಿ ಅವರು ಖಲಿಸ್ತಾನ್ ರಚನೆಯನ್ನು ಬೆಂಬಲಿಸಿ ಮಾತನಾಡಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net