ಕುಟುಂಬ ರಾಜಕಾರಣಕ್ಕೆ ಬೇಸತ್ತು ಜೆಡಿಎಸ್ ಸೇರ್ಪಡೆ

Siddanagouda Mudalagunda
ಸಿದ್ದನಗೌಡ ಮೂಡಲಗುಂಡಾ, ತಾಪಂ ಮಾಜಿ ಅಧ್ಯಕ್ಷ, ದೇವದುರ್ಗ.
Published on

ರಾಯಚೂರು: ದೇವದುರ್ಗ ತಾಲೂಕಿನ ಕುಟುಂಬ ರಾಜಕಾರಣಕ್ಕೆ ಬೇಸತ್ತು ಕಾಂಗ್ರೆಸ್ ತೊರೆದು ಪಕ್ಷದ ಹಲವು ಮುಖಂಡರೊಂದಿಗೆ ಜೆಡಿಎಸ್ ಸೇರುತ್ತಿರುವುದಾಗಿ ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಮೂಡಲಗುಂಡಾ ತಿಳಿಸಿದರು.

ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಮಾಜಿ ಸಂಸದ ವೆಂಕಟೇಶ ನಾಯಕ ಕಾಲದಿಂದಲೂ ಪಕ್ಷಕ್ಕಾಗಿ ದುಡಿಯುತ್ತಿದ್ದೇವೆ. ಅವರ ಮಕ್ಕಳು ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದರಿಂದ ಬೇಸರವಾಗಿದೆ ಎಂದರು.

ತಾಲೂಕಿನಲ್ಲಿ ಪಕ್ಷ ಒಂದು ಕುಟುಂಬಕ್ಕೆ ಮಾತ್ರ ಸಿಮೀತವಾಗಿದೆ. ಟಿಕೆಟ್‌ಗಾಗಿ ಒಂದೇ ಕುಟುಂಬದ ನಾಲ್ವರು ಅರ್ಜಿ ಸಲ್ಲಿಸಿದ್ದಾರೆ. ಪಕ್ಷಕ್ಕೆ ದುಡಿದವರನ್ನು ಕಡೆಗಣಿಸಲಾಗುತ್ತಿದೆ. ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಜತೆ ಒಳ ಒಪ್ಪಂದ ಮಾಡಿಕೊಂಡು ಬೇರೆಯವರು ಬೆಳೆಯದಂತೆ ಮಾಡಲಾಗುತ್ತಿದೆ.

ಕುಟುಂಬ ರಾಜಕಾರಣಕ್ಕೆ ಬೇಸತ್ತು ಡಿ.12ರಂದು ದೇವದುರ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದೇವೆ ಎಂದು ಸಿದ್ದನಗೌಡ ತಿಳಿಸಿದರು. ಮುಖಂಡರಾದ ಭೀಮಣ್ಣ, ರಂಗಣ್ಣ ಕೋಲ್ಕಾರ್, ಶರಣಬಸವ ನಾಯಕ, ಸಾಗರ ನಾಯಕ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net