

ರಾಯಚೂರು: ಮೂರು ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿಯ ಜೇವರ್ಗ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನ ದೇವದುರ್ಗ ಮೂಲದ ಹರ್ಷಿತಾ (18) ಹಾಗೂ ಭುವನ (16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೆ ಅದರ ಹಿಂದೆ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)