

ನವದೆಹಲಿ: ವಿವಿಧ ರಾಜ್ಯಗಳಿಗೆ ವಲಸೆ ಕಾರ್ಮಿಕರನ್ನು ಕಳುಹಿಸಲು ರೈಲ್ವೆ ಇಲಾಖೆ ಈಗಾಗಲೇ ಶ್ರಮಿಕ್ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ. ಇದೀಗ ಸಾಮಾನ್ಯ ಪ್ರಯಾಣಿಕರಿಗಾಗಿಯೂ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಹಂತಹಂತವಾಗಿ ಏಪ್ರಿಲ್ 12ರಿಂದ (ಮಂಗಳವಾರ) ಆರಂಭಿಸಲು ಮುಂದಾಗಿದೆ.
ಇದಕ್ಕಾಗಿ ಸೋಮವಾರ (ಮೇ11) ಸಂಜೆ ನಾಲ್ಕು ಗಂಟೆಯಿಂದ ಬುಕಿಂಗ್ ಆರಂಭಿಸಲಿದೆ. ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು.
ಈ ನಡುವೆ, ಬೇರೆ ಬೇರೆ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕರೆಯಿಸಿಕೊಳ್ಳಲು ಎಲ್ಲ ರಾಜ್ಯ ಸರ್ಕಾರಗಳು ಅನುವು ಮಾಡಿಕೊಡಬೇಕೆಂದು ರೈಲ್ವೆ ಇಲಾಖೆ ಮನವಿ ಮಾಡಿಕೊಂಡಿದೆ.
ಈವರೆಗೆ 350ಕ್ಕೂ ಅಧಿಕ ಶ್ರಮಿಕ್ ಎಕ್ಸ್ಪ್ರೆಸ್ ರೈಲುಗಳು 3.5 ಲಕ್ಷಕ್ಕೂ ಅಧಿಕ ಕಾರ್ಮಿಕರನ್ನು ಆವರವರ ರಾಜ್ಯಗಳಿಗೆ ತಲುಪಿಸಿವೆ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮಾಹಿತಿ ನೀಡಿದ್ದಾರೆ.
ಮಾಲ್ಡೀವ್ಸ್ ರಾಜಧಾನಿ ಮಾಲೆಗೆ ನೌಕಾಪಡೆಯ ಮತ್ತೊಂದು ಹಡಗು ಐಎನ್ಎಸ್ ಮಘರ್ ತಲುಪಿದೆ. ಅಂತೆಯೇ ರಿಯಾದ್ನಿಂದ 139 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನ ಪ್ರಯಾಣ ಆರಂಭಿಸಿದೆ.