ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್ ಕೊಡುತ್ತಿದ್ದ ಯುವಕರು; ನಂತರ ನಡೆದಿದ್ದು ಘೋರ ದುರಂತ!

railway_track
Published on

ಚೆನ್ನೈ: ಜಾಲತಾಣದಲ್ಲಿ ಫಾಲೋವರ್ಸ್ ಹೆಚ್ಚಿಸಿಕೊಂಡು ಫೇಮಸ್ ಆಗಲು ಈಗಿನ ಯುವ ಪೀಳಿಗೆ ಮಾಡುವ ಎಡವಟ್ಟುಗಳು ಕೆಲವೊಮ್ಮೆ ಪ್ರಾಣಕ್ಕೆ ಸಂಚಕಾರ ತಂದು ಬಿಡುತ್ತದೆ. ಅಂತಹದ್ದೇ ಘಟನೆವೊಂದು ನಡೆದಿದೆ.

ಇನ್‌ಸ್ಟಾಗ್ರಾಮ್​ನಲ್ಲಿ ವಿಡಿಯೋ ಅಪ್ಲೋಡ್ ಮಾಡಲು ಮೂವರು ಯುವಕರು​ ರೈಲ್ವೆ ಹಳಿ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ದಿಢೀರ್​ ಆಗಮಿಸಿದ ರೈಲಿಗೆ ಒಂದೇ ಊರಿನ ಮೂವರು ವಿದ್ಯಾರ್ಥಿಗಳು ಉಸಿರು ನಿಲ್ಲಿಸಿದ್ದಾರೆ.

ಚೆಂಗಲ್ಪಟ್ಟು ಪಕ್ಕದ ಚೆಟ್ಟಿಪುನ್ನಿಯಂ ಪ್ರದೇಶದ ಅಶೋಕ್ ಕುಮಾರ್, ಪ್ರಕಾಶ್ ಮತ್ತು ಮೋಹನ್ ಎಂಬುವರು ಮೃತ ವಿದ್ಯಾರ್ಥಿಗಳು. ಇವರು ಆಗಾಗ ಸೆಲ್ಫಿ ವಿಡಿಯೋ ಮಾಡಿ ಇನ್ ಸ್ಟಾಗ್ರಾಮ್​ನಲ್ಲಿ ಹಾಕುತ್ತಿದ್ದರು.
ಮಾರ್ಚ್ 7ರ ಸಂಜೆ ಮೂವರು ರೈಲು ಹಳಿ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ಚೆನ್ನೈನಿಂದ ಚೆಂಗಲ್ಪಟ್ಟಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಯುವಕರ ಮೃತದೇಹ ಸ್ಥಳದಲ್ಲೇ ಚೆಲ್ಲಾಪಿಲ್ಲಿಯಾಗಿದ್ದು, ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಚೆಂಗಲ್ಪಟ್ಟು ರೈಲ್ವೆ ಪೊಲೀಸರು ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net