ಜುಲೈ 19 ರಿಂದ 21 ರವರೆಗೆ ಭಾರೀ ಮಳೆ, 6 ಜಿಲ್ಲೆಗಳಿಗೆ ರೆಡ್​​ ಅಲರ್ಟ್​​…!

rfinalsss
Published on

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರೆದಿದೆ. ಅಬ್ಬರದ ಮಳೆಯಿಂದಾಗಿ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದ ವಿವಿಧೆಡೆ ಗುರುವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದೆ.

ಜುಲೈ 18 ರಿಂದ 21 ರವರೆಗೆ ಜೋರಾದ ಗಾಳಿಯೊಂದಿಗೆ ಕರಾವಳಿ ಜಿಲ್ಲೆಗಳಿಗೆ ಮತ್ತು ಜುಲೈ 17 ರಿಂದ 21 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಧಿಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 19 ರಿಂದ 21 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ 'ರೆಡ್ ಅಲರ್ಟ್' ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ ಹಾಗೂ ಹಾಸನ ಜಿಲ್ಲೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು.

ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು. ಸಣ್ಣ ಹಡಗುಗಳು ಸಂಚರಿಸದಂತೆ ಕ್ರಮವಹಿಸಬೇಕು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net