ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ, ಐದು ಜಿಲ್ಲೆಗಳಿಗೆ ಅಲರ್ಟ್​​​…!

rrr
Published on

ಬೆಂಗಳೂರು: ರಾಜ್ಯದ ಹಲವೆಡೆ ಇಂದು (ಜು.15)ರಂದೂ ಭಾರಿ ಗಾಳಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಪ್ರದೇಶವಾದ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಕಲಬುರಗಿ,ಬೀದರ್‌, ಧಾರವಾಡ, ರಾಯಚೂರು, ವಿಜಯಪುರ, ಬೆಳಗಾವಿ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ವೇಗವಾಗಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಉದ್ದೂಕ್ಕೂ ಬಿರುಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆಯಾಗ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರವಹಿಸಬೇಕು. ಇನ್ನೂ ಮಂಗಳವಾರವೂ ಕೆಲವೆಡೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಇಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗೆ ರೆಡ್‌ ಹಾಗೂ ಕೊಡಗು, ಹಾಸನ ಜಿಲ್ಲೆಗೆ ಆರೆಂಜ್‌ ಹಾಗೂ ಮೈಸೂರು ಜಿಲ್ಲೆಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಕಾರವಾರ: ಒಂದೂವರೆ ತಿಂಗಳಿಂದ ಸುರಿಯುತ್ತಿರುವ ಮಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಬಿರುಸುಗೊಂಡಿದೆ. ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಜೋರಾಗಿ ಮಳೆ ಅಬ್ಬರಿಸುತ್ತಿದ್ದು, ಗಾಳಿಯೂ ವೇಗವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net