7ರಿಂದ ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ

Lead Rain
Published on

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ.7ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಜ.7ರಿಂದ ಮುಂದಿನ 2 ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದೆ. ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net