ರಾಜ್ಯದ ಹಲವೆಡೆ 4 ದಿನ ಮಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್- Yellow Alert' in 4 districts

ಬೆಂ.ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ನ.5 ಮತ್ತು ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ನ.6ರಂದು ಜೋರು ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.
4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ರಾಜ್ಯದ ಹಲವೆಡೆ ವ್ಯಾಪಕ ಮಳೆ
Published on: 

ಬೆಂಗಳೂರು: ‘ಮುರಾಸು’ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೈಕ್ಲೋನ್ ಅಬ್ಬರದಿಂದ ತಮಿಳುನಾಡು, ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆ ಸುರಿದಿರೆ, ಕರ್ನಾಟಕ ಕೆಲವೆಡೆ ಮಂಗಳವಾರ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತ್ತು.

Also Read
ಅಬಕಾರಿ ಆಯುಕ್ತ ಅಧಿಕಾರ ಸ್ವೀಕರಿಸದ ಡಾ.ಜೆ. ರವಿಶಂಕರ್- Excise Commissioner
4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂ.ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ನ.5 ಮತ್ತು ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ನ.6ರಂದು ಜೋರು ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆ ಇರಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾರಪೂರ್ತಿ ಒಣಹವೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.