ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೂ 10 ಜಿಲ್ಲೆಗಳಲ್ಲಿ ಮಳೆಯೇ ಇಲ್ಲ! ಮತ್ತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ

rain
Published on

ಬೆಂಗಳೂರು: ಮುಂಗಾರು ಆರಂಭಗೊಂಡು ಎರಡು ತಿಂಗಳೂ ಸಮೀಪಿಸುತ್ತಿದ್ದು, ರಾಜ್ಯದಲ್ಲಿ ವಾಡಿಕೆಗಿಂತ ಉತ್ತಮ ವರ್ಷಧಾರೆಯಾಗಿದ್ದರೂ 10 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜತೆಗೆ, 6 ತಾಲೂಕುಗಳು ಮತ್ತು 53 ಹೋಬಳಿಗಳಲ್ಲಿ ಅತಿ ಹೆಚ್ಚು ಮಳೆ ಕುಂಠಿತವಾಗಿದೆ.

ಜೂ 1ರಿಂದ ಜು. 22ರವರೆಗೆ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬಿದ್ದರೆ, ಒಂದು ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಮಳೆ ಬಿದ್ದಿದೆ. ಆರಂಭದಲ್ಲೇ ನೈಋತ್ಯ ಮಾನ್ಸೂನ್ ಕೈಕೊಟ್ಟ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಕಾರಣವಾಗಿದೆ.

ಸಾಧಾರಣ ಮಳೆ: ರಾಜ್ಯದ ಹಲವೆಡೆ ಮುಂದಿನ 4 ದಿನ ಚದುರದಿಂತೆ ಸಾಧಾರಣ ಮಳೆ ಬೀಳಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಅಲ್ಲೆಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net