

ಬೆಂಗಳೂರು: ಬೆಂಗಳೂರಿನಲ್ಲಿ ವರಣುನ ಆರ್ಭಟ ಜೋರಾಗಿದೆ. ಭಾರಿ ಮಳೆಯಾಗುತ್ತಿದ್ದು, ಲಾಲ್ ಬಾಗ್ ರೋಡ್, ಕೊರಮಂಗಲ, ಮಡಿವಾಳ, ವಿಲ್ಸನ್ ಗಾರ್ಡನ್ ಬಳಿ ಮಳೆಯಿಂದಾಗಿ ಬೈಕ್ ಸವಾರರ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಸಂಜೆಯಿಂದಲೇ ಮಳೆ ಸರಿಯಲು ಆರಂಭವಾಗಿದ್ದು, ಇಂದಿನಿಂದ ಇನ್ನೊಂದು ವಾರ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು, ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಮಳೆಯಾಗುತ್ತಿದೆ. ಇನ್ನೊಂದು ವಾರ ಸಾಧಾರಣ, ಕೆಲವೊಮ್ಮ ಕೆಲ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ತಮಿಳುನಾಡು ಭಾಗದಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಕರಾವಳಿ ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು, ಪಶ್ಚಿಮಘಟ್ಟ ಜಿಲ್ಲೆಗಳಿಗೆ 8, 9ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿಗೆ ಯಾವುದೇ ಮಳೆ ಅಲರ್ಟ್ ಘೋಷಣೆ ಇಲ್ಲ.