ರಾಜ್ಯಾದ್ಯಂತ ಜೋರಾಗಲಿದೆ ವರುಣಾರ್ಭಟ ಹವಾಮಾನ ಇಲಾಖೆಯ ಎಚ್ಚರಿಕೆ…!

rain final
Published on

ಬೆಂಗಳೂರು: ಜುಲೈ 12ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಭಾಗದಲ್ಲಂತುಯ ವರುಣ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ.

ಜು. 10, 11 ಹಾಗೂ 12ರಂದು ಭಾರೀ ದೊಡ್ಡ ಮಟ್ಟದಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಂದು 100 ಮಿ.ಮೀ.ನಷ್ಟು ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಜು. 9, 11, 12ರಂದು ಯಾವುದೇ ವಾರ್ನಿಂಗ್ ನೀಡಲಾಗಿಲ್ಲವಾದರೂ ಮಳೆಯ ಸಾಧ್ಯತೆಗಳೂ ದಟ್ಟವಾಗಿವೆ ಎಂದು ಹೇಳಲಾಗಿದೆ.


ಜು. 10ರಂದು ಭಾರೀ ದೊಡ್ಡ ಪ್ರಮಾಣದಲ್ಲಿ ಮಳೆ ಬೀಳಲಿದೆ ಎಂದು ಕೆಎಸ್ಎನ್ ಡಿಎಂಸಿ ತಿಳಿಸಿದೆ.ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಿತ್ತು.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ತುಮಕೂರಿನಲ್ಲಿ ಮಳೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net