

ರಾಣೆಬೆನ್ನೂರ: ವಿದ್ಯಾಥಿರ್ಗಳು ಪ್ರಸ್ತುತ ದಿನಮಾನಗಳಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಜತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ನಗರಸಭೆ ಆಯುಕ್ತ ಕ್ಕೀರಪ್ಪ ಇಂಗಳಗಿ ಹೇಳಿದರು.
ತಾಲೂಕಿನ ಕಮದೋಡ ಗ್ರಾಮದ ರೇನ್ಬೋ ವಸತಿಯುತ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ವಾಷಿರ್ಕ ಇಂಟರ್ ಹೌಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಹರ ಠಾಣೆ ಪಿಎಸ್ಐ ಗಡ್ಡೆಪ್ಪ ಗುಂಜುಟಗಿ ಮಾತನಾಡಿ, ವಿದ್ಯಾಥಿರ್ಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಶಾಲಾ&ಕಾಲೇಜ್ ಹಂತದಲ್ಲಿ ನಡೆಯುವ ಕ್ರೀಡಾಕೂಟ ಸೇರಿ ಇತರ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದರು.
ಪ್ರಮುಖರಾದ ಬಿ.ಎಸ್. ಪಟ್ಟಣಶೆಟ್ಟಿ, ಎಸ್.ಬಿ. ಗುರಿಕಾರ, ಡಾ. ಸುರೇಶ ಸಿ.ಟಿ., ಲಲಿತಾ ಸುರೇಶ, ಎಸ್.ಎನ್. ಕಟ್ಟಿಮನಿ, ಮಾಲತೇಶ ಐ.ಕೆ., ವೀರಣ್ಣ ಸಿ.ಟಿ. ಮತ್ತಿತರರು ಪಾಲ್ಗೊಂಡಿದ್ದರು.