ರಾಜ್ಯದಲ್ಲಿ ಜೂನ್​ 6ರವರೆಗೆ ಮಳೆ ಸಾಧ್ಯತೆ: ವಿಳಂಬವಾಗಲಿದೆ ನೈಋತ್ಯ ಮುಂಗಾರು

Bengaluru Rain
Published on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 6ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗಲಿನ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜೋರಾದ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ. ಜೂನ್ 6ರ ನಡುವೆ ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಮುಂಗಾರು ವಿಳಂಬ

ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಲಿದೆ. ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರದಲ್ಲೇ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಅಪ್ಪಳಿಸಬೇಕು. ಆದರೆ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭ ಕೆಲವು ದಿನಗಳ ಮಟ್ಟಿಗೆ ವಿಳಂಬವಾಗುವ ಸಾಧ್ಯತೆ ಇದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net