VIDEO| ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ವರುಣನ ಆರ್ಭಟ: ರಸ್ತೆಗಳು ಜಲಾವೃತ

Rain
Published on

ನವದೆಹಲಿ: ಭಾನುವಾರ ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ವಾತಾವರಣ ನೋಡಿದರೆ ಮುಂದಿನ ಮಂಗಳವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿಯ ಅದಾಮ್​ಪುರ್​, ಹಿಸ್ಸಾರ್​, ಹನ್ಸಿ, ಜಿಂದ್​, ಗೊಹನಾ, ಗನ್ನೌರ್​, ಬರೂತ್​, ರೋಹ್ಟಕ್​, ಸೋನಿಪತ್​, ಬಾಗಪತ್​, ಗುರುಗ್ರಾಮ್​, ನೋಯ್ಡಾ, ಘಾಜಿಯಬಾದ್​ ಮತ್ತು ಫರೀದಾಬಾದ್​ ಸೇರಿದಂತೆ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಸುರಿಯುತ್ತಿರುವ ಭಾರಿ ಮಳೆದ ರಸ್ತೆಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡೆತಡೆಯಾಗಿದ್ದಲ್ಲದೆ, ಜನಜೀವನವೂ ಅಸ್ತವ್ಯಸ್ತವಾಗಿದೆ. ಹಳ್ಳ ದಿಣ್ಣೆಗಳಲ್ಲಿ ಮಳೆ ನೀರು ತುಂಬಿ ನಿಂತಿದ್ದು, ವಾಹನ ಚಾಲಕರು ಪರದಾಡುತ್ತಿದ್ದಾರೆ.

ಹರಿಯಾಣ ಮತ್ತು ಪಂಜಾಬ್​ ರಾಜ್ಯಗಳಲ್ಲಿ ಮುಂದಿನ ಒಂದು ವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅದರಲ್ಲೂ ಮುಂದಿನ ಮೂರು ದಿನಗಳಲ್ಲಿ ದೆಹಲಿ, ಹರಿಯಾಣ ಮತ್ತು ಪಂಜಾಬ್​ನಲ್ಲಿ ಭಾರಿ ಮಳೆಯಾಗಲಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net